ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸ್ಪಂದನಾ ಅವರ ಪಾರ್ಥಿವ ಶರೀರವನ್ನು ನಾಳೆ ಬೆಂಗಳೂರಿಗೆ ತರಲಾಗುತ್ತಿದೆ ಎಂದು ತಿಳಿದು ಬಂದಿದೆ. ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಇಬ್ಬರೂ ಪರಸ್ಪರ ಪ್ರೀತಿಸಿ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದರು.