main logo

ಅತ್ತೆ ಲೀಲಾವತಿ ಅಂತಿಮ ದರ್ಶನ ಪಡೆದ ನಟಿ ಲೀಲಾವತಿ ಸೊಸೆ, ಮೊಮ್ಮಗ

ಅತ್ತೆ ಲೀಲಾವತಿ ಅಂತಿಮ ದರ್ಶನ ಪಡೆದ ನಟಿ ಲೀಲಾವತಿ ಸೊಸೆ, ಮೊಮ್ಮಗ

ಬೆಂಗಳೂರು: ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಇಂದು ಮುಂಜಾನೆ 5 ಗಂಟೆಯಿಂದ ನೆಲಮಂಗಲದಲ್ಲಿ ಆರಂಭವಾಗಿದ್ದು ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು ಮತ್ತು ಲೀಲಾವತಿ ಮೊಮ್ಮಗ ಯುವರಾಜ್ ಆಗಮಿಸಿದ್ದಾರೆ.

ಈ ಮುಂಚೆ ವಿನೋದ್‌ ರಾಜ್‌ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ವಿನೋದ್‌ ರಾಜ್‌ ಅವರಿಗೆ ಈಗಾಗಲೇ ಮದುವೆಯಾಗಿದೆ ಮತ್ತು ಎದೆಯೆತ್ತರಕ್ಕೆ ಬೆಳೆದಿರುವ ಒಬ್ಬ ಮಗನೂ ಇದ್ದಾನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಪ್ರಕಾಶ್‌ ರಾಜ್‌ ಮೆಹು ಪೋಸ್ಟ್‌ ಹಂಚಿಕೊಂಡಿದ್ದರು. ಇದು ಸಾಕಷ್ಟು ವಿವಾದಕ್ಕೂ ಕಾರಣವಾಗಿತ್ತು. ಇದಾದ ಬಳಿಕ ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!