ಚೆನ್ನೈ: ಖಡಕ್ ಪೊಲೀಸ್ ಅಧಿಕಾರಿಯಾಗಿ ಖ್ಯಾತಿ ಪಡೆದು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ. ಅಣ್ಣಾಮಲೈ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆಯಿದೆ.
ಅಣ್ಣಾಮಲೈ ತಮಿಳುನಾಡಿನಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಂಘಟನೆಗೆ ಬಲಬಂದಿದ್ದು, ಬಿಜೆಪಿಗೆ ನೆಲೆಯಿಲ್ಲದ ತಮಿಳುನಾಡಿನಲ್ಲಿ ಪಕ್ಷವನ್ನು ಜೀವಂತ ಸಂಘಟನೆಯಾಗಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅಣ್ಣಾಮಲೈ ಅವರಿಗೆ ಉನ್ನತ ಸ್ಥಾನ ನೀಡಲು ಬಿಜೆಪಿ ಮುಖಂಡರು ಚಿಂತನೆ ನಡೆಸಿದ್ದಾರೆ.
ಅಣ್ಣಾಮಲೈ ಅವರು ಜುಲೈ 28 ರಿಂದ ತಮಿಳುನಾಡಿನಾದ್ಯಂತ ‘ಎನ್ ಮನ್ ಎನ್ ಮಕ್ಕಳ್’ ಎಂಬ ಶೀರ್ಷಿಕೆಯಡಿ ಪಾದಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ. ರಾಮೇಶ್ವರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಪಾದಯಾತ್ರೆ’ಯನ್ನು ಉದ್ಘಾಟಿಸಲಿದ್ದಾರೆ.