ಪುತ್ತೂರು: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡ ಬಡಗನ್ನೂರು ಕುದ್ಕಾಡಿ ಗುರುಪ್ರಸಾದ್ ರೈಯವರ ಮನೆಗೆ ಸೆ.07ರ ಮುಂಜಾನೆ ನುಗ್ಗಿದ ಮುಸುಕುಧಾರಿ ದರೋಡೆಕೋರರ ಗುಂಪು ಮನೆಯಲ್ಲಿದ್ದವರನ್ನು ಕಟ್ಟಿಹಾಕಿ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದ ಮನೆಗೆ ನಿನ್ನೆ ರಾತ್ರಿ (ಸೆ.07) ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.
ಈ ಸಂದರ್ಭದಲ್ಲಿಗುರುಪ್ರಸಾದ್ ರೈ ಮತ್ತು ಅವರ ತಾಯಿಯೊಂದಿಗೆ ಮಾತನಾಡಿದ ಪುತ್ತಿಲ ಅವರು ಮನೆಮಂದಿಗೆ ಧೈರ್ಯ ತುಂಬಿದರು.
ಪುತ್ತೂರಿನ ಗ್ರಾಮಾಂತರ ಭಾಗದ ಹಲವು ಕಡೆಗಳಲ್ಲಿ ರಾತ್ರಿ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಪೊಲೀಸರು ಗ್ರಾಮಾಂತರ ಭಾಗದಲ್ಲಿರಾತ್ರಿ ಬೀಟ್ ವ್ಯವಸ್ಥೆ ಮಾಡಿ ಜನಸಾಮಾನ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಈ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಇದೇ ಸಂದರ್ಭದಲ್ಲಿ ಪುತ್ತಿಲ ಪರಿವಾರ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.