ಹೊಸದಿಲ್ಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂದಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ 6 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ)ದ ವಶಕ್ಕೆ ನೀಡಿ ಶುಕ್ರವಾರ ಆದೇಶ ನೀಡಿದೆ.
ಇಡಿ ಅಧಿಕಾರಿಗಳು ನಿನ್ನೆ ಮಧ್ಯಾಹ್ನ ಕೇಜ್ರಿವಾಲ್ ಅವರನ್ನು ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 10 ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಕೇಜ್ರಿವಾಲ್ ಅವರನ್ನು ಮಾರ್ಚ್ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.
ರದ್ದುಗೊಳಿಸಿರುವ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಬಂಧಿಸಿದೆ.