main logo

ಪಟಾಕಿ ಅಂಗಡಿಗಳಲ್ಲಿ ಸ್ಫೋಟ ಕನಿಷ್ಠ 11 ಮಂದಿ ಸಾವು

ಪಟಾಕಿ ಅಂಗಡಿಗಳಲ್ಲಿ ಸ್ಫೋಟ ಕನಿಷ್ಠ 11 ಮಂದಿ ಸಾವು

ಚೆನ್ನೈ: ಆಘಾತಕಾರಿ ಘಟನೆಯೊಂದರಲ್ಲಿ ತಮಿಳುನಾಡಿನ ಶಿವಕಾಶಿಯ ಎರಡು ಪಟಾಕಿ ಚಿಲ್ಲರೆ ಅಂಗಡಿಗಳಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ. ಪಟಾಕಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಚಿಲ್ಲರೆ ಮಾರಾಟ ಮಳಿಗೆಗಳು ಮಾನ್ಯ ಪರವಾನಗಿ ಹೊಂದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ. ಶಿವಕಾಶಿಯ ಪಟಾಕಿ ಘಟಕದಲ್ಲಿ ಹಠಾತ್ ಸ್ಫೋಟದಲ್ಲಿ ಏಳು ಸುಟ್ಟ ದೇಹಗಳನ್ನು ಹೊರ ತೆಗೆದಿದ್ದೇವೆ. ಅವರ ಗುರುತುಗಳನ್ನು ಇನ್ನೂ ಪತ್ತೆ ಹಚ್ಚಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಮಿಕರು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಸಿಬ್ಬಂದಿಯನ್ನು ಸೇವೆಯಲ್ಲಿ ನಿರತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!