Site icon newsroomkannada.com

ಅಯೋಧ್ಯೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಮೋದಿ: ಡಿಟೇಲ್ಸ್‌ ಇಲ್ಲಿದೆ ನೋಡಿ

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಇಂದು (ಜನವರಿ 22) ಪ್ರಾಣಪ್ರತಿಷ್ಠೆ ನೆರವೇರಿಸಲಾಗುತ್ತದೆ. ರಾಮಮಂದಿರದ (Ram Mandir) 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ. ನರೇಂದ್ರ ಮೋದಿ ಅವರು ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ

ಮೋದಿ ಅಯೋಧ್ಯೆ ಭೇಟಿಯ ವೇಳಾಪಟ್ಟಿ
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
ಬೆಳಗ್ಗೆ 11ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2: ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದೆ. ಪ್ರಾಣಪ್ರತಿಷ್ಠೆ ಬಳಿಕ ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 7.30ಕ್ಕೆ ಸಂಧ್ಯಾರತಿಯೊಂದಿಗೆ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವು ಸಮಾರೋಪವಾಗಲಿದೆ.

Exit mobile version