main logo

ರಾಮಮಂದಿರ ಉದ್ಘಾಟನೆ ದಿನದಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

ರಾಮಮಂದಿರ ಉದ್ಘಾಟನೆ ದಿನದಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

ಅಯೋಧ್ಯೆ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ (ಜ.18) ಹೇಳಿದ್ದಾರೆ.ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗುವುದು.

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಕೂಡ ಭಾಗವಹಿಸಬೇಕು ಎಂಬ ಕಾರಣಕ್ಕೆ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಅರ್ಧ ರಜೆ ನೀಡಲಾಗುವುದು ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!