ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಇಂದು (ಬುಧವಾರ) ಕರ್ನಾಟಕದ ಬಹುತೇಕ ಎಲ್ಲಾ ರೈತ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆಕೊಟ್ಟಿವೆ. ಶುಕ್ರವಾರ ಕರ್ನಾಟಕ ಬಂದ್ಗೆ ಕನ್ನಡ ಸಂಘಟನೆಗಳು ತೀರ್ಮಾನ ಮಾಡಿವೆ. ನಗರದ ಪ್ರಮುಖ ಜಂಕ್ಷನ್ ಗಳು ಹಾಗೂ ಪ್ರಸಿದ್ದ ಕಟ್ಟಡಗಳು, ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿಯಿಂದಲೇ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಟೌನ್ ಹಾಲ್ ಬಳಿ ಹೊಯ್ಸಳ ಬೀಟ್ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇತ್ತ ರಾಜಧಾನಿಯಲ್ಲಿ ಸೆಕ್ಷನ್ 144 ಹಾಕಲಾಗಿದೆ
ಬೆಂಗಳೂರು ಬಂದ್ ನಡುವೆ ಎಂದಿನಂತೆ ಬಿಎಂಟಿಸಿ ಬಸ್ಗಳು ರಸ್ತೆಗೆ ಇಳಿದಿವೆ. ಮೆಜೆಸ್ಟಿಕ್ ನಿಲ್ದಾಣದಿಂದ ಬಸ್ಗಳ ಸಂಚಾರ ಆರಂಭಗೊಂಡಿವೆ. ಇತ್ತ ಶಾಂತಿನಗರ ಡಿಪೋದಿಂದಲೂ ಬಸ್ ಕಾರ್ಯಾಚರಣೆ ಆರಂಭಗೊಂಡಿವೆ. ಆಟೋ, ಟ್ಯಾಕ್ಸಿಗಳ ಸಂಚಾರವೂ ಎಂದಿನಂತಿದೆ. ಕೆಆರ್ ಮಾರ್ಕೆಟ್ನಲ್ಲಿಯೂ ವ್ಯಾಪಾರ ವಹಿವಾಟು ನಡೆಯುತ್ತಿದೆ.
ಬೆಂಗಳೂರು ನಗರದ ಎಲ್ಲಾ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ, ರಕ್ಷಣೆ ದೃಷ್ಟಿಯಿಂದ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಆದೇಶ ಹೊರಡಿಸಿದ್ದಾರೆ.