ಬಂಟ್ವಾಳ: ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠೆಯಂಗವಾಗಿ ಬಂಟ್ವಾಳದಲ್ಲಿ ನದಿಮಧ್ಯೆ ಸತ್ಯನಾರಾಯಣ ಪೂಜೆ ಮಾಡುವ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯ ಹಾಗೂ ಅಯೋಧ್ಯೆ ಕರಸೇವೆಯಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ಬಂಟ್ವಾಳದ ಗೋವಿಂದ ಪ್ರಭು ಈ ಪೂಜೆಯ ರೂವಾರಿ.
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ ಜ. 21ರ ರಾತ್ರಿ 7ರ ಬಳಿಕ ಈ ಪೂಜಾ ವಿಧಿಗಳು ನಡೆಯಿತು. ನದಿಯ ನೀರಿನ ಮಧ್ಯೆ ತೆಪ್ಪದ ಮಾದರಿಯನ್ನು ರಚಿಸಿ ದೀಪಾರಾಧನೆಯ ಬೆಳಕಿನಲ್ಲಿ ಈ ಕಾರ್ಯಕ್ರಮ: ಆಯೋಜಿಸಲಾಯಿತು.