ಮಂಗಳೂರು: ಆಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ದ.ಕ ಜಿಲ್ಲೆಯ ಮಂಗಳೂರು ನಗರದಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.ಈ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜ.21 ಮಧ್ಯರಾತ್ರಿಯಿಂದ ಜ.23 ರ ಮುಂಜಾನೆಯವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಈ ಆದೇಶ ಹೊರಡಿಸಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.ಫ್ಲೆಕ್ಸ್ ಬಂಟಿಂಗ್ಸ್ ಗಳ ಮೇಲೆ ನಿಗಾ ಇಡಲು ಪಾಲಿಕೆಗೆ ಸೂಚನೆಯನ್ನೂ ನೀಡಲಾಗಿದೆ.
- 21 January 2024
By Team Newsroom
10 months ago
0
Less than a minute