ನವದೆಹಲಿ: ಇಸ್ರೇಲ್ (Israel) ಹಾಗೂ ಹಮಾಸ್ (Hamas) ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ. ಇದರ ನಡುವೆ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ದೆಹಲಿಗೆ ಬಂದಿಳಿದಿದೆ. ಆಪರೇಷನ್ ಅಜಯ್ (Operation Ajay) ಹೆಸರಿನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಆಪರೇಷನ್ ಅಜಯ್ ಕಾರ್ಯಾಚರಣೆಯಡಿಯಲ್ಲಿ, ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ವಿಮಾನವು ಗುರುವಾರ ಸಂಜೆ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತು.
ಈ ವಿಮಾನದಲ್ಲಿ 211 ಭಾರತೀಯರೊಂದಿಗೆ ಒಂದು ನವಜಾತ ಶಿಶುವೂ ಇದ್ದಿದ್ದು ವಿಶೇಷವಾಗಿತ್ತು.
ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೂರು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಂತರದ ಇಸ್ರೇಲಿ ಪ್ರತೀಕಾರಕ್ಕೆ ಪ್ರತಿಕ್ರಿಯೆಯಾಗಿ ಈ ಕಾರ್ಯಾಚರಣೆಯು 2,500 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿತು. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ.