ಉಡುಪಿ: ಬೆಳಪು ಔದ್ಯೋಗಿಕ ನಗರದಲ್ಲಿ ನೀರು ತುಂಬಿದ ಗುಂಡಿಗೆ ಈಜಲು ತೆರಳಿದ್ದ ನಾಲ್ವರು ಮಕ್ಕಳ ಪೈಕಿ ಓರ್ವ ಮೃತಪಟ್ಟಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಮೃತ ಬಾಲಕನನ್ನು ಬೆಳಪು ವಸತಿ ಬಡಾವಣೆಯ ನಿವಾಸಿ ವಿಶ್ವಾಸ್ (11) ಎಂದು ಗುರುತಿಸಲಾಗಿದೆ. ಈತ ಇನ್ನಂಜೆ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ. ವಿಶ್ವಾಸ್ ನಾಲ್ವರೊಂದಿಗೆ ಔದ್ಯೋಗಿಕ ನಗರದಲ್ಲಿ ನೀರು ತುಂಬಿದ್ದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದನು. ನಾಲ್ಕು ಮಂದಿ ನೀರಿಗೆ ಇಳಿದಿದ್ದು, ಈಜಲು ಆಗದೆ ವಿಶ್ವಾಸ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇತರ ಮೂವರು ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.