main logo

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ್ ಬಂಗೇರ ವಿಧಿವಶ

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ್ ಬಂಗೇರ ವಿಧಿವಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಮುಖಂಡ, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ವಸಂತ ಬಂಗೇರಾ ಅವರ ಆರೋಗ್ಯವು ಕಳೆದ ಕೆಲ ದಿನಗಳ ಹದಗೆಟ್ಟಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬಿಜೆಪಿ ಪಕ್ಷದಿಂದ 1983 ರಲ್ಲಿ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1985 ಮತ್ತೆ ಬಿಜೆಪಿಯಿಂದ ಶಾಸಕರಾದ ಅವರು, 1994ರಲ್ಲಿ ಜನತಾದಳದಿಂದ ಶಾಸಕರಾಗಿ ಆಯ್ಕೆಯಾದರು. 2008 ಮತ್ತು 2013 ರಲ್ಲಿ ಕಾಂಗ್ರೆಸ್‌ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದರು.

ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Related Articles

Leave a Reply

Your email address will not be published. Required fields are marked *

error: Content is protected !!