Site icon newsroomkannada.com

ಬೆಳ್ತಂಗಡಿ: ಹಿಮ್ಮುಖವಾಗಿ ಚಲಿಸಿದ ಪಿಕಪ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಚಾಲಕನ ಅಜಾಗರೂಕತೆಯಿಂದಾಗಿ ಪಿಕಪ್‌ ವಾಹನ ಹಿಮ್ಮುಖವಾಗಿ ಚಲಿಸಿ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

 

ರುಕ್ಮ ಮುಗೇರ ಮೃತ ವ್ಯಕ್ತಿ. ಶಿಬಾಜೆ ಬಳಿ ಪಿಕಪ್ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ.

 

ಅಪಘಾತದ ಪರಿಣಾಮ, ರುಕ್ಮ ಮುಗೇರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು ತತ್‌ಕ್ಷಣ ಅವರಿಗೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

 

ಈ ವಿಚಾರವಾಗಿ ಉಪೇಂದ್ರ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version