ಮಂಗಳೂರು: ಟ್ವಿಟರ್ ನಲ್ಲಿ ನಕಲಿ ಖಾತೆ ಮೂಲಕ ತುಳುನಾಡಿನ ದೈವ ಆರಾಧನೆ ಮತ್ತು ಮಹಿಳೆಯರ ಅಶ್ಲೀಲ ಪೋಸ್ಟ್ ಮಾಡಿದ ಆರೋಪಿಯನ್ನು ಮಂಗಳೂರು ನಗರ ನಾರ್ಕೊಟಿಕ್ ಮತ್ತು ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಅಮೃತಹಳ್ಳಿ ನಿವಾಸಿ ಶಿವರಾಜ್ (37) ಬಂಧಿತ ಆರೋಪಿಯಾಗಿದ್ದು, ತುಳುನಾಡಿನ ದೈವಾರಾಧನೆ ಸಂರಕ್ಷಣೆ ಯುವ ವೇದಿಕೆ ಸದಸ್ಯರು ನೀಡಿದ ದೂರಿನಂತೆ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಂತೆ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗ್ಡೆ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ 7 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.