ಬೆಂಗಳೂರು: ಇಂದು (ಜೂ.11) ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಾಗುತ್ತದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.
ವಿಧಾನಸೌಧದ ಮುಂಭಾಗ 4 ನಿಗಮದ ಸಾಮಾನ್ಯ ಬಸ್ ನಿಲ್ಲಿಸಲು ಸಿದ್ಧತೆ ನಡೆದಿದೆ. ನಾಡಗೀತೆ ಹಾಡುವ ಮೂಲಕ ಚಾಲನೆಗೊಳ್ಳುವ ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜತೆಗಿರುವರು. ನಂತರ ಸಿದ್ದರಾಮಯ್ಯ ಅವರು ಬಸ್ನಲ್ಲೇ ಸಿಟಿ ರೌಂಡ್ಸ್ ಹಾಕಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ.