ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಒಂದು ದೊಡ್ಡ ಅಪ್‌ಡೇಟ್ ಬಂದಿದೆ. ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾ (ಪ್ರತಿಷ್ಠಾಪನೆ) ಜನವರಿ 22 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ರಾಮ ಜನ್ಮಭೂಮಿ ಟ್ರಸ್ಟ್‌ನ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮತ್ತು ಉಡುಪಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ.
ಈ ಕುರಿತು ಮೋದಿ ಟ್ವೀಟ್ ಮಾಡಿದ್ದಾರೆ. “ಜೈ ಸಿಯಾ ರಾಮ್! ಇಂದು ಭಾವನೆಗಳ ತುಂಬಿದ ದಿನ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಅವರು ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯ ಸಂದರ್ಭ ಅಯೋಧ್ಯೆಗೆ ಬರುವಂತೆ ನನ್ನನ್ನು ಆಹ್ವಾನಿಸಿದರು. ನನಗೆ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆತಿರುವುದು ನನ್ನ ಭಾಗ್ಯ ಎಂದು ಭಾವಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
जय सियाराम!
आज का दिन बहुत भावनाओं से भरा हुआ है। अभी श्रीराम जन्मभूमि तीर्थ क्षेत्र ट्रस्ट के पदाधिकारी मुझसे मेरे निवास स्थान पर मिलने आए थे। उन्होंने मुझे श्रीराम मंदिर में प्राण-प्रतिष्ठा के अवसर पर अयोध्या आने के लिए निमंत्रित किया है।
मैं खुद को बहुत धन्य महसूस कर रहा… pic.twitter.com/rc801AraIn
— Narendra Modi (@narendramodi) October 25, 2023