main logo

ಮುಖ್ಯಮಂತ್ರಿ ಕಾರಿಗೆ ಮುತ್ತಿಗೆ ಹಾಕಲು ಯತ್ನ ; ಬಿಜೆಪಿ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಮುಖ್ಯಮಂತ್ರಿ ಕಾರಿಗೆ ಮುತ್ತಿಗೆ ಹಾಕಲು ಯತ್ನ ; ಬಿಜೆಪಿ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಕಾಂಗ್ರೆಸ್‌ ವತಿಯಿಂದ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ಅಡ್ಯಾರ್‌ ಕಾಲೇಜು ಮೈದಾನದಲ್ಲಿ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ರಾಜ್ಯದ ಹಲವು ಸಚಿವರು, ಶಾಸಕರು ಭಾಗವಹಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ.
ಈ ವೇಳೆ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಶಾಸಕ ಭರತ್‌ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್‌ ಮೇಲೆ ವಿನಾಕಾರಣ ಎಫ್‌ ಐಆರ್‌ ದಾಖಲಿಸಿರುವುದನ್ನು ವಿರೋಧಿಸಿ ವಿಮಾನ ನಿಲ್ದಾಣ ರಸ್ತೆಯ ಬೋಂದೆಲ್‌ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರತಿಭಟನೆ ನಡೆಸಲು ಮುಂದಾದ ಮಂಗಳೂರು ಉತ್ತರ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯಕರತರನ್ನು ಪೊಲೀಸರು ತಡೆದಿದ್ದಾರೆ. ಮುಖ್ಯಮಂತ್ರಿಗೆ ಶೇರಾವ್ ಹಾಕಲು ಯತ್ನ ಮಾಡಿದ್ದು ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಭಿತ್ತಿ ಪತ್ರ ಹಿಡಿದು ಸಿಎಂ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

 

Related Articles

Leave a Reply

Your email address will not be published. Required fields are marked *

error: Content is protected !!