ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿ ಟಿಕೆಟ್ಗಾಗಿ ಆಗ್ರಹಿಸಿ ಮೀನುಗಾರ ಸಮುದಾಯದ ಮುಖಂಡರ ಗುಂಪು ಮಲ್ಪೆ ಏಳೂರು ಮೊಗವೀರ ಭವನದಿಂದ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯವರೆಗೂ ನಾಳೆ ಬೈಕ್ ರ್ಯಾಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನದಿಂದ ಬೈಕ್ ರ್ಯಾಲಿ ಆರಂಭವಾಗುವ ನಿರೀಕ್ಷೆ ಇದೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಕ್ರಿಯಾಶೀಲರಾಗಿಲ್ಲ ಎಂದು ಜನವರಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ. ಸುವರ್ಣ ನೇತೃತ್ವದಲ್ಲಿ ಈ ರ್ಯಾಲಿ ಆಯೋಜಿಸಲಾಗಿದೆ.
ಕರಾವಳಿ ಬೈಪಾಸ್ ಮತ್ತು ಮಲ್ಪೆ ನಡುವಿನ ಮೂರೂವರೆ ಕಿಮೀ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪೂರ್ಣಗೊಳಿಸದ ಶೋಭಾ ಕರಂದ್ಲಾಜೆ ಅವರನ್ನು ಕಿಶೋರ್ ಸುವರ್ಣ ತರಾಟೆಗೆ ತೆಗೆದುಕೊಂಡಿದ್ದರು, ಇದರ ವಿಡಿಯೋ ಕಳೆದ ತಿಂಗಳು ವೈರಲ್ ಆಗಿತ್ತು. ಶನಿವಾರ ನಡೆಯುವ ಬೈಕ್ ರ್ಯಾಲಿ ಕಾರ್ಯಕ್ರಮದ ಪೋಸ್ಟರ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸಂಘಟಕರ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಪೋಸ್ಟರ್ನಲ್ಲಿ ‘ನಿಸ್ವಾರ್ಥ’ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ ಮತ್ತು ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ.
ಬಿಜೆಪಿಯ ಉಡುಪಿ ಸಿಎಂಸಿ ಕೌನ್ಸಿಲರ್ಗಳಾದ ಸುಂದರ್ ಕಲ್ಮಾಡಿ, ಯೋಗೀಶ್ ಸಾಲಿಯಾನ್ ಮತ್ತು ಇತರ ಮುಖಂಡರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಟಿಎನ್ಐಇಗೆ ತಿಳಿಸಿವೆ. ಪಕ್ಷದ ಹೈಕಮಾಂಡ್ಗೆ ತಮ್ಮ ಸಂದೇಶವನ್ನು ರವಾನಿಸಲು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಲಾಗುವುದು