ನವದೆಹಲಿ: ವಿಧಾನ ಸಭಾ ಚುನಾವಣೆಯ (Assembly Election) ಬಳಿಕ ಬಿಜೆಪಿಗೆ (BJP) ಹತ್ತಿರವಾಗುತ್ತಾ ಹೋಗಿರುವ ಜೆಡಿಎಸ್ (JDS) ಇದೀಗ ಕೇಸರಿ ಪಕ್ಷದೊಂದಿಗೆ ಅಧಿಕೃತ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಫಿಕ್ಸ್ ಆಗಿದ್ದು ಈ ಕುರಿತಾಗಿ ಇಂದು (ಸೆ.21) ಜೆಡಿಎಸ್ ಪಕ್ಷದ ವರಿಷ್ಠ ಹೆಚ್ ಡಿ ದೇವೇಗೌಡರೇ (H D Devegowda) ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ.
ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಏರ್ಪಟ್ಟಲ್ಲಿ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸಂಸತ್ ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿಗೆ ಸಹಕಾರಿಯಾಗಬಹುದು ಮತ್ತು ಅಸ್ತಿತ್ವಕ್ಕಾಗಿ ಹೋರಾಡುತ್ತಿರುವ ಜೆಡಿಎಸ್ ಗೂ ಇದು ಪ್ರಯೋಜನವಾಗಲಿದೆ ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಮೈತ್ರಿಗೆ ಸಂಬಂಧಿಸಿದಂತೆ ಬಿಜೆಪಿ ವರಿಷ್ಠರು ಜೆಡಿಎಸ್ ವರಿಷ್ಠರಾಗಿರುವ ಮಾಜಿ ಪ್ರಧಾನಿ ದೆವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (H D Kumaraswamy) ಮತ್ತು ಕುಪೇಂದ್ರ ರೆಡ್ಡಿ (Kupendra Reddy) ಗುರುವಾರ (ಸೆ.21) ರಾತ್ರಿ ಬಿರುಸಿನ ಚರ್ಚೆಗಳ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು (ಸೆ.22) ಬೆಳಿಗ್ಗೆ ಹೆಚ್ ಡಿ ದೇವೇಗೌಡರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು ಈ ವೇಳೆ ಅವರು ಎನ್.ಡಿ.ಎ (NDA) ಮೈತ್ರಿಕೂಟ ಸೇರುವ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಗಳಿವೆ.
ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) ಬಿಜೆಪಿ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದರು.
ಮೈತ್ರಿ ವಿಚಾರದಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡರ ನಿಲುವಿಗೆ ಬದ್ಧ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ (H D Revanna) ತಿಳಿಸಿದ್ದಾರೆ.
ಈ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಸಾರಾ ಮಹೇಶ್ (Sa Ra Mahesh) ಕೂಡಾ ಭಾಗಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.