Site icon newsroomkannada.com

Lok Sabha Elections: ಇಂದು ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Elections) ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಸದ್ಯ ಟಿಕೆಟ್ ಹಂಚಿಕೆಯ ಕಸರುತ್ತು ಜೋರಾಗಿದೆ. ಇಂದು ದೆಹಲಿಯಲ್ಲಿ ಬಿಜೆಪಿ (BJP) ಸಭೆ ನಡೆಯಲಿದ್ದು, ಎರಡನೇ ಪಟ್ಟಿ ಬಿಡುಗಡೆ ಸಂಬಂಧ ಚರ್ಚೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ಭರದಿಂದ ಸಿದ್ಧತೆ ನಡೆಸುತ್ತಿದೆ. ಅದರ ಭಾಗವಾಗಿ 195 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ (Narendra Modi) ನೇತೃತ್ವದಲ್ಲಿ ಸಭೆ ನಡೆಯಲಿದ್ದು. ಎರಡನೇ ಪಟ್ಟಿ ಘೋಷಣೆ ಆಗುವ ಸಾಧ್ಯತೆ ಇದೆ. ಅದರಲ್ಲೂ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಘೋಷಣೆ ಆಗೋ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಟಿಕೆಟ್ ಹಂಚಿಕೆ ಹೇಗಿರಬಹುದು ಎಂಬ ಕುತೂಹಲ ಸೃಷ್ಟಿಯಾಗಿದೆ. ಯಾಕಂದ್ರೆ ಮಂಡ್ಯದಿಂದ ಸ್ಪರ್ಧೆಗೆ ಸುಮಲತಾ ಬೇಡಿಕೆ ಇಟ್ಟಿದ್ದರೆ, ಹಾಸನದಲ್ಲಿ ಜೆಡಿಎಸ್ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದೆ. ಇನ್ನು ಬಿಜೆಪಿಯಲ್ಲೇ ಮಾಜಿ ಸಚಿವರಾದ ವಿ. ಸೋಮಣ್ಣ, ಮಾಧುಸ್ವಾಮಿ, ಸಿ.ಟಿ ರವಿ, ಡಾ. ಕೆ.ಸುಧಾಕರ್, ಬಿ.ಸಿ ಪಾಟೀಲ್ ಸೇರಿ ಇತರರು ಲಾಬಿ ನಡೆಸುತ್ತಿದ್ದಾರೆ. ಹೀಗಾಗಿ ಟಿಕೆಟ್ ಹಂಚಿಕೆ ತೀವ್ರ ಕುತೂಹಲ ಮೂಡಿಸಿದೆ.

Exit mobile version