ಪುತ್ತೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ. ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ ಮಾಹಿತಿಯನ್ನು ಅರುಣ್ ಪುತ್ತಿಲರವರಿಗೆ ರವಾನಿಸಿದೆ.
ರಾಜ್ಯ ಬಿಜೆಪಿಯ ವರಿಷ್ಠರಾದ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ಕುರಿತು ಅರುಣ್ ಪುತ್ತಿಲರಿಗೆ ಸಂದೇಶ ರವಾನಿಸಿ ಪಕ್ಷದಲ್ಲಿ ಗೌರವಯುತ ಸ್ಥಾನ ನೀಡುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಪಕ್ಷದ ಹಿರಿಯರ ಮಾತಿಗೆ ಅರುಣ್ ಪುತ್ತಿಲ ಸಮ್ಮತಿ ಸೂಚಿಸಿರುವುದಾಗಿ ತಿಳಿದುಬಂದಿದೆ.