main logo

ಕಾರ್ಕಳದ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಕಾರ್ಕಳದ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಕಾರ್ಕಳ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮೇ 8ರಂದು ಕಾರ್ಕಳದ ಬಂಗ್ಲೆಗುಡ್ಡೆಯ ಕಜೆ ಎಂಬಲ್ಲಿ ನಡೆದಿದೆ. ಕಜೆಯ ಮನೆಯೊಂದರಲ್ಲಿ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಸುಡುಮದ್ದು ತಯಾರಿಕೆ ವೇಳೆ ಅವಘಡ ಸಂಭವಿಸಿದೆ. ಪರಿಣಾಮ ಇಬ್ಬರು ಕಾರ್ಮಿಕ ಮಹಿಳೆಯರು ಗಾಯಗೊಂಡಿದ್ದಾರೆ. ಕಟ್ಟಡ ಹಾನಿಗೀಡಾಗಿದೆ. ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು, ಓರ್ವ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಖಾದರ್‌ ಎಂಬವರಿಗೆ ಸೇರಿದ ಘಟಕ ಇದಾಗಿದ್ದು, ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!