Site icon newsroomkannada.com

ಮೆಟ್ರೋದಲ್ಲಿ ಪ್ರಯಾಣ ಮಾಡಿದ ಬಾಲಿವುಡ್​ ನಟ ಹೃತಿಕ್ ರೋಷನ್

ಬಾಲಿವುಡ್​ ನಟ ಹೃತಿಕ್ ರೋಷನ್ ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೃತಿಕ್ ಅವರು ‘ಫೈಟರ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಆಯಕ್ಷನ್ ದೃಶ್ಯ ಶೂಟ್ ಮಾಡಬೇಕಿತ್ತು. ಕಾರಿನಲ್ಲಿ ತೆರಳಿದರೆ ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಅರಿತ ಅವರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

ಮೆಟ್ರೋದಲ್ಲಿ ಪ್ರಯಾಣಿಸಿದ ಅನುಭವವನ್ನು ಅವರು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಮೆಟ್ರೋ ಪ್ರಯಾಣದಿಂದ ಸಮಯ ಉಳಿತಾಯ ಆಗುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ. ‘ಅವರು ನನಗೆ ಕೊಟ್ಟ ಪ್ರೀತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ’ ಎಂದು ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಈ ವೇಳೆ ಹೃತಿಕ್ ರೋಷನ್ ಜೊತೆ. ಫ್ಯಾನ್ಸ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

Exit mobile version