ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಇಸ್ಲಾಮಿಕ್ ಪಕ್ಷದ ರಾಜಕೀಯ ಸಭೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡು ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ, ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ (ಜೆಯುಐ-ಎಫ್) ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಈ ಸ್ಪೋಟ ಸಂಭವಿಸಿದ್ದು, 400ಕ್ಕೂ ಹೆಚ್ಚು ಜನರು ಸಭೆಯಲ್ಲಿ ಪಾಲ್ಗೊಂಡಿದ್ದರು.
39 ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, 123 ಮಂದಿ ಗಾಯಗೊಂಡಿದ್ದಾರೆ, ಇದರಲ್ಲಿ 17 ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಆರೋಗ್ಯ ಸಚಿವ ರಿಯಾಜ್ ಅನ್ವರ್ ಎಎಫ್‌ಪಿಗೆ ತಿಳಿಸಿದ್ದಾರೆ. ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ISIS ಗುಂಪಿನ ಸ್ಥಳೀಯ ಘಟಕ ಇತ್ತೇಚೆಗೆ JUI-F ವಿರುದ್ಧ ದಾಳಿ ನಡೆಸುತ್ತಿದೆ.
ಕಳೆದ ವರ್ಷ, ದೇಶದ ಉತ್ತರ ಮತ್ತು ಪಶ್ಚಿಮ ಭಾಗದ ಮಸೀದಿಗಳು ಮತ್ತು ಮದರಸಾಗಳ ಮೇಲೆ ದಾಳಿ ನಡೆಸಲಾಗಿತ್ತು. 2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಪಾಕಿಸ್ತಾನದಲ್ಲಿ ದಾಳಿಗಳು ಹೆಚ್ಚುತ್ತಿದೆ.