ಉಡುಪಿ: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.
ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ಮೂರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಪತಿ ಪತಿಯ ನಡುವಿನ ವೈಮನಸ್ಯವೇ ಕೊಲೆಗೆ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.