Site icon newsroomkannada.com

ಅರ್ಕುಳ ದ್ವಾರದ ಬಳಿ ಬಸ್‌ ಡಿಕ್ಕಿಯಾಗಿ ಯುವಕ ಸಾವು

ಮಂಗಳೂರು: ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್‌ ಸಮೀಪದ ಅರ್ಕುಳ ದ್ವಾರದ ಬಳಿ ರವಿವಾರ ಬೆಳಗ್ಗೆ ಸಂಭವಿಸಿದೆ
ಸ್ಥಳೀಯ ನಿವಾಸಿ ಚರಣ್‌ ರಾಜ್‌ (34) ಮೃತಪಟ್ಟವರು. ಇವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಬಸ್‌ ಢಿಕ್ಕಿಯಾಗಿದೆ.
ಈ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಅವೈಜ್ಞಾನಿಕ ಕಾಮಗಾರಿ ಇದಕ್ಕೆ ಕಾರಣವಾಗಿದ್ದು ಹೆದ್ದಾರಿ ಪ್ರಾಧಿಕಾರ ಯಾವುದೇ ರೀತಿಯ ಸುರಕ್ಷತ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು. ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿದರು.
ಬ್ಯಾರಿಕೇಡ್‌ ಇಲ್ಲದೆ ದುರಂತ
ಈ ಸ್ಥಳದಲ್ಲಿ ವಾಹನಗಳ ವೇಗ ತಡೆಯಲು ಬ್ಯಾರಿಕೇಡ್‌ ಹಾಕಲಾಗಿತ್ತು. ಆದರೆ ಶನಿವಾರ ರಾತ್ರಿ ಯಾವುದೋ ವಾಹನ ಢಿಕ್ಕಿಯಾಗಿ ಅದು ಬಿದ್ದಿತ್ತು. ಹಾಗಾಗಿ ಬಸ್‌ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ.

Exit mobile version