ಉಪ್ಪಿನಂಗಡಿ: ಶಿರಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ ವಾಲಿ ನಿಂತಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
