main logo

ಕಾವೇರಿ ವಿವಾದ: ಮೇಕೆದಾಟು ಯೋಜನೆಯಿಂದ ಸಮಸ್ಯೆ ಪರಿಹಾರ- ಸಿಎಂ

ಕಾವೇರಿ ವಿವಾದ: ಮೇಕೆದಾಟು ಯೋಜನೆಯಿಂದ ಸಮಸ್ಯೆ ಪರಿಹಾರ- ಸಿಎಂ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಬಗ್ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಮೇಕೆದಾಟು ಯೋಜನೆಯಿಂದ ಕಾವೇರಿ ನೀರಿನ ಸಮಸ್ಯೆ ಪರಿಹಾರವಾಗುತ್ತದೆ ಎಂದು  ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೇಕೆದಾಟು ಡ್ಯಾಂ ನಿರ್ಮಿಸಿದ್ರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು.ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಆರಂಭವಾಗಿದೆ. ವರ್ಚುವಲ್ ಮೂಲಕ ಸಭೆ ನಡೆಯುತ್ತಿದ್ದು, ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿದ್ದಾರೆ ಎಂದರು.

Related Articles

Leave a Reply

Your email address will not be published. Required fields are marked *

error: Content is protected !!