ನವದೆಹಲಿ: ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಭಾರೀ ಪ್ರತಿಭಟನೆ ನಡೆಯುತ್ತಿದ್ದರು, ಮತ್ತೆ ಕರ್ನಾಟಕಕ್ಕೆ ಹಿನ್ನಡೆ ಆಗಿದೆ.
ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದು, ಈ ವೇಳೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.