Site icon newsroomkannada.com

ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡ್ಡಯನ

ಶ್ರೀಹರಿಕೋಟಾ: ಭಾರತದ ಚಂದ್ರಯಾನ-3 ಜುಲೈ 14ರಂದು 2.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಮಿಷನ್ ಯಶಸ್ವಿಯಾದರೆ ಚಂದ್ರನ ಮೇಲೆ ಇಳಿದ ನಾಲ್ಕನೇ ರಾಷ್ಟ್ರವಾಗಲಿದೆ ಭಾರತ. ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್‌ಎಲ್‌ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಅನ್ನು ಕೂರಿಸಲಾಗಿದೆ. ಇದ

ನ್ನು ಲಾಂಚ್ ವೆಹಿಕಲ್ ಮಾರ್ಕ್ 3 (LM-3) ಎಂದು ಮರುನಾಮಕರಣ ಮಾಡಲಾಗಿದ್ದು, ಈ GSLV 43.5 ಮೀಟರ್ ಎತ್ತರವಿದೆ. ಈ ಪ್ರಯಾಣವು 40 ದಿನಗಳದ್ದಾಗಿದ್ದು, ಆಗಸ್ಟ್ 23 ರಂದು ಬಾಹ್ಯಾಕಾಶ ನೌಕೆಯು ಚಂದ್ರನ ಮೇಲೆ ಸ್ಪರ್ಶಿಸುವ ನಿರೀಕ್ಷೆಯಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜುಲೈ 2019 ರಲ್ಲಿ ನಡೆಸಿದ ಚಂದ್ರಯಾನ- 2 ಕೊನೇ ಹಂತದಲ್ಲಿ ವಿಫಲವಾಗಿತ್ತು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ ಮಿಷನ್ ಉಡಾವಣೆ ಮಾಡಿದ್ದು, ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಹೊಂದಿದೆ. ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವಿದೆ.

Exit mobile version