Site icon newsroomkannada.com

7 ಲಕ್ಷ ರೂ. ಮೌಲ್ಯದ ಚರಸ್‌ ಸಾಗಾಟ ಓರ್ವ ವಶಕ್ಕೆ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಆ.1ರಂದು  ಮಧ್ಯಾಹ್ನ 3.15 ಗಂಟೆಗೆ ನಂಬರ್ ಫ್ಲೇಟ್ ಇಲ್ಲದ ಕಂದು ಬಣ್ಣದ ಸ್ವಿಫ್ಟ್ ಕಾರನ್ನು ಚಾಲಕನಿಗೆ ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕನು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದು, ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿ ಕಾರಿನ ಸವಾರ ಅಬ್ದುಲ್ ಅಜೀಜ್ ಎಂಬಾತನು ಅಕ್ರಮವಾಗಿ 230.4 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಚರಸ್ ಅನ್ನು ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟು ಸಾಗಿಸುತ್ತಿರುವುದು ಕಂಡುಬಂದಿರುತ್ತದೆ. ಕಾರು ಹಾಗೂ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದು, ಕಾರಿನಲ್ಲಿದ್ದ ಇನ್ನಿತರ ಆರೋಪಿತರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

Exit mobile version