ಮಂಗಳೂರು; ಸೌಜನ್ಯ ಕೊಲೆ ಪ್ರಕರಣ ಕುರಿತು ಮರುತನಿಖೆಗೆ ಕೇಂದ್ರ ಸರ್ಕಾರ ಯೋಚಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದ ಹೀಗಾಗಿ ಕೇಂದ್ರ ಸರ್ಕಾರವೇ ಈ ಬಗ್ಗೆ ನಿರ್ಧರಿಸಬೇಕಿದೆ ಎಂದರು. ಇನ್ನು ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.
ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ಹಾಗಾಗಿ ನಾನು ಮತ್ತು ಕೆಲವರು ಹೋಗಿದ್ದೆವು ಅದರಲ್ಲಿ ಯಾವುದೇ ರಾಜಕೀಯ ನಡೆದಿಲ್ಲ ಎಂದರು.
1 Comment