ಬೆಂಗಳೂರು: ವೀರ ಮಕ್ಕಳ ಕುಣಿತಕ್ಕೆ ಸಿಎಂ ಸಿದ್ದರಾಮಯ್ಯ ಮಸ್ತ್ ಡ್ಯಾನ್ಸ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಹಂಪಿಯಲ್ಲಿ ನಡೆದ ‘ಕರ್ನಾಟಕ ಸಂಭ್ರಮ-50’ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದರು.
ಈ ಕಾರ್ಯಕ್ರಮಕ್ಕೆ ನಗಾರಿ ಬಾರಿಸೋ ಮೂಲಕ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಕೊನೆಯಲ್ಲಿ ಜಾನಪದ ಹಾಡಿಗೆ ಸಿಎಂ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ವಿಶ್ವ ವಿಖ್ಯಾತ ಹಂಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಕರ್ನಾಟಕ ಸಂಭ್ರಮ-50’ ಕಾರ್ಯಕ್ರಮದ ವೇದಿಕೆಯಲ್ಲಿ ಕುಣಿಯುತ್ತಿದ್ದ ಕಲಾವಿದರ ಜೊತೆ ಸೇರಿ ಸಖತ್ ಡ್ಯಾನ್ಸ್ ಮಾಡಿ ಎಲ್ಲರ ಶಿಳ್ಳೆ, ಚಪ್ಪಾಳೆ ಪಡೆದಿದ್ದಾರೆ.
ವರುಣಾ ಕ್ಷೇತ್ರದ ತಮ್ಮ ಒಡನಾಡಿಗಳ ಜೊತೆ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಸ್ಟೆಪ್ಸ್ ಹಾಕಿ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಏನಯ್ಯ ಶಂಬುಲಿಂಗವೇ ಎಂಬ ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಸಿದ್ದರಾಮಯ್ಯ ಕುಣಿತವನ್ನು ನೋಡ ನೋಡುತ್ತಿದ್ದಂತೆ ಶಾಸಕರು ಹಾಗೂ ಸಚಿವರು ಸಿಳ್ಳೆ ಹೊಡೆದು ಚಪ್ಪಾಳೆ ತಟ್ಟಿದ್ದಾರೆ. ಸದ್ಯ ಸಿಎಂ ಡ್ಯಾನ್ಸ್ ಮಾಡಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ-೫೦ ರ ಉದ್ಘಾಟನಾ ಸಮಾರಂಭದಲ್ಲಿ ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಮೈಮನ ಹಗುರಾಗಿಸಿತು.
ಬಾಲ್ಯದಲ್ಲಿ ಕಲಿತ ವಿದ್ಯೆ ಬದುಕಿನುದ್ದಕ್ಕೂ ನೆನಪಿನಲ್ಲುಳಿಯುತ್ತಂತೆ.
ಹೆಜ್ಜೆ ಹಾಕುತ್ತಾ ಹಾಕುತ್ತಾ ನನ್ನೂರ ಗೆಳೆಯರೊಡನೆ ಕುಣಿಯುತ್ತಿದ್ದ ಬಾಲ್ಯದ ದಿನಗಳು ನೆನಪಾದವು.#ಕರ್ನಾಟಕಸಂಭ್ರಮ೫೦ pic.twitter.com/kIOXdkPa6o— Siddaramaiah (@siddaramaiah) November 3, 2023