ಮೂಡಿಗೆರೆ: ಚಿಕ್ಕಮಗಳೂರಿನಲ್ಲಿ ಘೋರ ಅನಾಹುತವೊಂದು ನಡೆದು ಹೋಗಿದೆ. ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (19) ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ.
ಹಾಸನದ ವುಮೆನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ, ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ವಾರ ಮನೆಗೆ ಬಂದಿದ್ದು, ಡಿಸೆಂಬರ್ 21 ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.
ಇಂದು (ಭಾನುವಾರ) ಮುಂಜಾನೆ ಗ್ರಾಮದ ಕುಡಿಯುವ ನೀರಿನ ಮೋಟರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ.