Site icon newsroomkannada.com

ಫ್ರೀ ಯೋಜನೆಗಳ ಜೊತೆ ಬಾಂಬ್ ಫ್ರೀ’ ವಿಡಿಯೋ

ಗರಡಿಮಜಲು ನಿವಾಸಿ ವಿರುದ್ಧ ಪ್ರಕರಣ ದಾಖಲು
ಉಡುಪಿ: ರಾಜ್ಯ ಸರಕಾರದ ಉಚಿತ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ನಿಂದಿಸಿ ಅವಹೇಳನಕಾರಿ ಪದ ಬಳಕೆ ಮಾಡಿ ವಿಡಿಯೋ ವೈರಲ್ ಮಾಡಿದ ಗರಡಿ ಮಜಲು ನಿವಾಸಿ ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ದಿವಾಕರ್ ಕೋಟ್ಯಾನ್ ವಿಡಿಯೋದಲ್ಲಿ, ‘ಬಸ್ ಟಿಕೆಟ್ 2000ರೂ., ವಿದ್ಯುತ್ ಬಿಲ್ ಫ್ರಿ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಫ್ರೀ ಕೂಡ ರಾಜ್ಯ ಸರಕಾರ ಕೊಡುತ್ತಿದೆ.ಇದಕ್ಕೂ ಏನು ಹಣ ಕೊಡಲು ಇಲ್ಲ. ಎಲ್ಲವೂ ಫ್ರಿ. ನೇರವಾಗಿ ಮೇಲೆ…ನೋ ಪಾಸ್ ಪೋಟ್ ನೋ ವೀಸಾ.. ಸನ್ಮಾನ್ಯ ಮುಖ್ಯಮಂತ್ರಿ ಸಿದ್ರುಲ್ಲಾ ಖಾನ್.. ಹಿಂದುಗಳೇ ಫ್ರೀ ಬೇಕಲ್ಲ ತೆಗೆದುಕೊಳ್ಳಿ,..ಮುಂದೆ ಇನ್ನು ಆರು ತಿಂಗಳಿಗೆ ಬಸ್, ವಿದ್ಯುತ್, 2000ರೂ. ಜೊತೆ ಬಾಂಬ್ ಕೂಡ ಫ್ರೀ ಸಿಗುತ್ತದೆ. ಮಜಾ ಮಾಡಿ ಎಂದು ಹೇಳಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ. ದಿವಾಕರ್ ಕೋಟ್ಯಾನ್ ರಾಜ್ಯ ಸರಕಾರದ ಯೋಜನೆಗಳ ಜೊತೆ ಬಾಂಬ್ ಉಚಿತ ಹೇಳು ವುದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಹೇಳನಕಾರಿ ಯಾಗಿ ನಿಂದಿಸಿದ್ದಾನೆ.ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅದರಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Exit mobile version