ಬೆಂಗಳೂರು: ಎರಡು ದಿನಗಳ ಕಾಲ ನಡೆಯುವ ಈ ಕಂಬಳದಲ್ಲಿ ಸ್ಥಳೀಯರಿಗೆ ಅರ್ಥವಾಗುವಂತೆ ಕನ್ನಡದಲ್ಲಿ ವೀಕ್ಷಕ ವಿವರಣೆ ಇರಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಂಬಳ ಕೂಟಕ್ಕೆ ಏಳರಿಂದ ಎಂಟು ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ವಿಶಾಲ ಪಾರ್ಕಿಂಗ್, ಸ್ವಯಂ ಸೇವಕರು ಸೇರಿ ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದರು. ಕಂಬಳ ನಡೆಯುವ ಅರಮನೆ ಮೈದಾನಕ್ಕೆ ಜನರು ಬರಲು ಸುಲಭವಾಗುವಂತೆ 150 ಹೆಚ್ಚುವರಿ ಬಸ್ ಗಳನ್ನು ಈ ಮಾರ್ಗಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಂಬಳದ ಜೊತೆಗೆ ನಿರಂತರವಾಗಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ. ಕರಾವಳಿಯ ಯಕ್ಷಗಾನ, ಹುಲಿ ಕುಣಿತ ಮುಂತಾದ ಕಲೆಗಳ ಪ್ರದರ್ಶನ ನಡೆಯಲಿದೆ. ಅಲ್ಲದೆ ಖ್ಯಾತ ಕಲಾವಿದರ ಸಂಗೀತ ಸಂಜೆ ನಡೆಯಲಿದೆ ಎಂದರು.
.