Site icon newsroomkannada.com

ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ ಅಧಿಕೃತ ಆರಂಭ

ಬೆಂಗಳೂರು: ಜುಲೈ 1ರಿಂದ ‘ಗೃಹಜ್ಯೋತಿ’ ಯೋಜನೆ ಗ್ಯಾರಂಟಿ ಆರಂಭವಾಗಲಿದೆ. ಮಾಸಿಕ 200 ಯೂನಿಟ್​ವರೆಗಿನ ವಿದ್ಯುತ್ ಬಳಕೆ ಉಚಿತವಾಗಲಿದೆ. ಜೂನ್ 18ರಿಂದ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಗೃಹಜ್ಯೋತಿ ಯೋಜನೆಯ ಒಟ್ಟು ಫಲಾನುಭವಿಗಳು 2.14 ಕೋಟಿ ಇದ್ದು ಸದ್ಉ ಗೃಹಜ್ಯೋತಿಗೆ ಇದುವರೆಗೆ 85,91,005 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಅದೇರೀತಿ ಇಂದಿನಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಇಲಾಖೆ ಸಚಿವ ಕೆ.ಹೆಚ್​.ಮುನಿಯಪ್ಪ ತಿಳಿಸಿದ್ದಾರೆ. ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದಿದ್ದಾರೆ.

Exit mobile version