ಬೆಂಗಳೂರು: ಇದೇ ಜನವರಿ 21ರಂದು ಮಂಗಳೂರಿನಲ್ಲಿ ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ. ಸಮಾವೇಶ ಮುಂದೂಡಿದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆ ಮೂಲಕ ತಿಳಿಸಿದ್ದು, ಸಮಾವೇಶದ ದಿನಾಂಕ ಮತ್ತೆ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಸಮಾವೇಶದ ತಯಾರಿ ಕಾರ್ಯಗಳನ್ನ ಮುಂದುವರೆಸುವಂತೆ ಸೂಚಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು(ಜನವರಿ 15) ರಾತ್ರಿ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಬಳಿಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಜನವರಿ 21ರಂದು ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿ ಪ್ರಕಟಣೆ ಹೊರಡಿಸಿದ್ದಾರೆ.
ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿತ್ತು. ಇದರೊಂದಿಗೆ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಮುಂದಾಗಿತ್ತು. ಆದ್ರೆ, ಜನವರಿ 21ರಂದು ಕೇಂದ್ರದ ನಾಯಕರು ಲಭ್ಯತೆ ಇಲ್ಲದಂತೆ ಕಾಣುತ್ತೆ. ಹೀಗಾಗಿ ಖರ್ಗೆ ಅವರ ಸೂಚನೆ ಮೇರೆಗೆ ಮಂಗಳೂರು ಸಮಾವೇಶವನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.