ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಹತ್ಯ ಮಾಡಲಾಗಿದೆ. ಪ್ರೀತಿಯ ವಿಚಾರಕ್ಕೆ ಬೆಳಗಾವಿ ಮೂಲದ ಫಯಾಜ್ ಎಂಬಾತ 11 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ.
ಕೊಲೆಯಾದ ಯುವತಿ ತಂದೆಯನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಗಳ ಸಾವಿಗೆ ನ್ಯಾಯ ಸಿಗಲೇಬೇಕು ಅಂತ ನಿರಂಜನ್ ಹಿರೇಮಠ್ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.