ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) (Congress MLA raja venkatappa nayaka) ನಿಧನರಾಗಿದ್ದಾರೆ. ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 22) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
