Site icon newsroomkannada.com

ಸಿಡಿಗೆ ತಡೆಯಾಜ್ಞೆ ತರದ ವಿಪಕ್ಷ ನಾಯಕ ಬೇಕಾಗಿದ್ದಾರೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾದ ಬಳಿಕ ಕಳೆದ ಹಲವು ತಿಂಗಳಿನಿಂದ ವಿರೋಧಪಕ್ಷದ ನಾಯಕನ ಆಯ್ಕೆಗೆ ಬಿಜೆಪಿ ತಿಣುಕಾಡುತ್ತಿದೆ. ಈ ಬಗ್ಗೆ ಸಭೆಗಳ ಮೇಲೆ ಸಭೆ ಮಾಡುತ್ತಿದ್ದರೂ ಯಾವುದೇ ಪ್ರತಿಫಲ ದೊರೆಯುತ್ತಿಲ್ಲ. ಈ ಕುರಿತು ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ಹೇಳಿದೆ.

ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆಂದು ಹೇಳಿದೆ.

Exit mobile version