Site icon newsroomkannada.com

ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಎರಡು ಲಕ್ಷ ರೂ. ಪರಿಹಾರ ವಿತರಣೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತನಿಗೆ ರಾಜ್ಯ ಸರ್ಕಾರದ ವತಿಯಿಂದ ಬುಧವಾರ ಎರಡು ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು. ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಎಂಎಲ್ ಸಿ ಐವಾನ್ ಡಿಸೋಜಾ ಮನವಿ ಮಾಡಿದ್ದರು. ಅದರಂತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗಿದೆ. ಪರಿಹಾರದ ಚೆಕ್ ಅನ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಡಿಸಿ ಸಂತೋಷ್ ವಿತರಣೆ ಮಾಡಿದರು.

ಪುರುಷೋತ್ತಮ್ ಆಟೋ ಚಾಲಕರಾಗಿ ವೃತ್ತಿ ಜೀವನ ನಡೆಸುತ್ತಿದ್ದರು. ಒಮ್ಮೆ ಆಟೋದಲ್ಲಿ ಪ್ರಯಾಣಿಕರೊಬ್ಬರು ಹಿಡಿದುಕೊಂಡಿದ್ದ ಕುಕ್ಕರ್ ಸಿಡಿದು, ಆಟೋ ರಿಕ್ಷಾ ನಜ್ಜುಗುಜ್ಜಾಗಿತ್ತು. ಪುರುಷೋತ್ತಮ್ ಕೂಡ ತೀವ್ರ ಸ್ವರೂಪದ ಸುಟ್ಟ ಗಾಯಗಳಿಂದ ಬಳಲಿ ಮಂಗಳೂರಿನ ಫಾದ‌ರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿರುತ್ತಾರೆ ಪರಿಹಾರ ಸಂಬಂಧಿತ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ವಿಶೇಷ ಪ್ರಕರಣ ಎಂದು ಪರಿಹಾರ ಮಂಜೂರು ಮಾಡಿ ಆದೇಶಿಸಲಾಗಿತ್ತು. ನವೆಂಬರ್ 19ರಂದು ಮಂಗಳೂರಿನ ನಾಗುರಿ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು.

Exit mobile version