ನವದೆಹಲಿ: ಭಾರತೀಯ ಜನತಾ ಪಕ್ಷ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.
ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಪಟ್ಟ ಖಚಿತ: ರಾಷ್ಟ್ರೀಯ ರವಿ ಅವರನ್ನು ಕೆಳಗಿಳಿಸಿದ ಹಿಂದೆ ರಾಜ್ಯಾಧ್ಯಕ್ಷ ಹುದ್ದೆ ಕೊಡುವ ಇರಾದೆ ಎನ್ನಲಾಗಿದೆ. ಕಳೆದೆರಡು ತಿಂಗಳಿನಿಂದ ಚರ್ಚೆಯ ವಿಷಯವಾಗಿರುವ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಹುದ್ದೆ ಸಮಸ್ಯೆ ಸದ್ಯದಲ್ಲೇ ಬಗೆಹರಿಯುವ ಲಕ್ಷಣ ಗೋಚರಿಸುತ್ತಿದೆ.
भाजपा राष्ट्रीय अध्यक्ष श्री @JPNadda ने निम्नलिखित केंद्रीय पदाधिकारियों के नामों की घोषणा की है- pic.twitter.com/0aaArxHF30
— BJP (@BJP4India) July 29, 2023