ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲಕಟ್ಟೆಯಲ್ಲಿ ಈ ಅಪಘಾತ ಸಂಭವಿಸಿದೆ.
ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ಎಂಬವರ ಪುತ್ರಿ ಕತೀಜಹಾನ (20) ಮೃತ ಬಾಲಕಿ. ಆಕೆಯ ತಾಯಿ ಸಮೀಮಾ ಮತ್ತು ಚಾಲಕ ಶಾನ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.