ಬಾಲಿವುಡ್‌ನ ಹೆಸರಾಂತ ಜೋಡಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ. ಪ್ರೀತಿಸಿ ಮದುವೆ ಯಾದ ಈ ಜೋಡಿ ಎಲ್ಲರಿಗೂ ಮಾದರಿ ಎಂಬಂತೆ ಜೀವನ ನಡೆಸುತ್ತಿದ್ದಾರೆ. ಇದೀಗ ಅವರಿಬ್ಬರು ಬೇರೆಯಾಗುತ್ತಿದ್ದಾರೆ ಎಂಬ ವರದಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ರೆಡ್ಡಿಟ್ ಬಳಕೆದಾರರಲ್ಲಿ ಒಬ್ಬರು ಇದಕ್ಕೆ ಸಂಬಂಧಿಸಿದ ಫೋಟೋವನ್ನು ಹಂಚಿಕೊಂಡಿದ್ದಾರೆ. ‘ಅಭಿಷೇಕ್ ಅವರು ತಮ್ಮ ಇತ್ತೀಚಿನ ಸಂದರ್ಶನಗಳಲ್ಲಿ ತಮ್ಮ ಮದುವೆಯ ಉಂಗುರವನ್ನು ಧರಿಸುತ್ತಿಲ್ಲ, ಇಲ್ಲಿಯವರೆಗೆ ಅವರು ಯಾವಾಗಲೂ ಅದನ್ನು ಧರಿಸುತ್ತಿದ್ದರು. ಹೀಗಾಗಿ ಅಭಿಷೇಕ್ ಹಾಗೂ ಐಶ್ವರ್ಯಾ ಸಪರೇಟ್ ಆಗುತ್ತಾರೆ ಎಂಬುದು ನಿಜವೆಂದು ತೋರುತ್ತಿದೆ’ ಎಂದು ಬರೆದುಕೊಂಡಿದ್ದು ಇದೀಗ ಭಾರೀ ವೈರಲ್ ಆಗಿದೆ.
ಮದುವೆಯ ಉಂಗುರ ಧರಿಸದ ಅಭಿಷೇಕ್ ಬಚ್ಚನ್ ಅಭಿಷೇಕ್ ತಮ್ಮ ಮದುವೆಯ ಉಂಗುರವನ್ನು ಧರಿಸದೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಇದಕ್ಕೆ ನಾನಾ ಈತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಅವರಲ್ಲಿ ಒಬ್ಬರು, ‘ಉಂಗುರ ಹಾಕಿಲ್ಲ ಎಂದ ಮಾತ್ರಕ್ಕೆ ಅವರು ಬೇರೆಯಾಗುತ್ತಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ’ ಎಂದಿದ್ದಾರೆ. ಮತ್ತೊಬ್ಬರು, ‘ಬಚ್ಚನ್ ಫ್ಯಾಮಿಲಿಯಲ್ಲಿ ವಿಚ್ಛೇದನ ಅಸಾಧ್ಯ ಎಂದು ನಾನು ಯಾವಾಗಲೂ ಭಾವಿಸುತ್ತೇನೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಅಮಿತಾಭ್ ಬದುಕಿರುವವರೆಗೆ ಅವರು ಹೀಗಾಗಲು ಬಿಡುವುದಿಲ್ಲ’ ಎಂದಿದ್ದಾರೆ.
ಮತ್ತೊಬ್ಬರು ‘ಬಹುಶಃ ಅಭಿಷೇಕ್ ಮತ್ತು ಐಶ್ಚರ್ಯಾ ಕ್ಯಾಮರಾಗಳ ಮುಂದೆ ಮಾತ್ರ ಖುಷಿಯಾಗಿರುವಂತೆ ನಟಿಸುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ.