main logo

ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪಿ.ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 25, 1962 ರಂದು ಜನಿಸಿದರು. ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜು ಮತ್ತು ಬಿಎಂಎಸ್ ಕಾಲೇಜು ವಿದ್ಯಾರ್ಥಿ. ಜನವರಿ 2, 2015 ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು ಡಿಸೆಂಬರ್ 30, 2016 ರಂದು ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.

ರಾಜ್ಯ ಹೈಕೋರ್ಟ್‌ನಲ್ಲಿ 1990 ರಲ್ಲಿ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಅವರ ಕೊಠಡಿಯಲ್ಲಿದಿನೇಶ್ ಕುಮಾರ್ ಅವರ ಕಾನೂನು ಅಭ್ಯಾಸ ಪ್ರಾರಂಭವಾಯಿತು. ನ್ಯಾಯಮೂರ್ತಿ ಕುಮಾರ್ ಅವರನ್ನು 1998 ರಲ್ಲಿ ಕೇಂದ್ರ ಸರ್ಕಾರದ ಹೆಚ್ಚುವರಿ ಸ್ಥಾಯಿ ವಕೀಲರಾಗಿ ಮತ್ತು 2003 ರಲ್ಲಿ ಹಿರಿಯ ಸ್ಥಾಯಿ ವಕೀಲರಾಗಿ ನೇಮಿಸಲಾಯಿತು.

Related Articles

Leave a Reply

Your email address will not be published. Required fields are marked *

error: Content is protected !!