ಬೆಳ್ತಂಗಡಿ: ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ, ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ, ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ, ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ’ ವಿಚಾರಿಸಿದ್ದಾಳೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ‘ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪುಜ್ಞೆ ಕಳಕೊಂಡಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ‘ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.