Site icon newsroomkannada.com

ಮಂಗಳೂರು ಬಂದರಿಗೆ ಕಚ್ಚಾತೈಲ ಹೊತ್ತು ಬರುತ್ತಿದ್ದ ಹಡಗಿನ ಮೇಲೆ ಡ್ರೋನ್‌ ದಾಳಿ

ನವದೆಹಲಿ: ಶನಿವಾರ ಅರೆಬಿಯನ್ ಸಮುದ್ರದಲ್ಲಿ ವ್ಯಾಪಾರಿ ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿದ್ದು, ಭಾರೀ ಸ್ಫೋಟದ ಸದ್ದು ಕೇಳಿ ಬಂದಿದೆ. ಈ ಘಟನೆಯಲ್ಲಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಈ ಹಡಗಿನಲ್ಲಿ 20 ಭಾರತೀಯ ಸಿಬ್ಬಂದಿ) ಇದ್ದಾರೆ. ದಾಳಿಗೊಳಗಾದ ಹಡಗಿನತ್ತ ಭಾರತೀಯ ಕರಾವಳಿ ಕಾವಲು ಪಡೆಯ ನೌಕೆ ಧಾವಿಸಿದೆ. ಈ ದಾಳಿಯು ಪೋರ್‌ಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲ್ಸ್ ದೂರದಲ್ಲಿ ನಡೆದಿದೆ. ಮಂಗಳೂರು ಕಡೆಗೆ ಬರುತ್ತಿದ್ದ ಈ ವ್ಯಾಪಾರಿ ಹಡಗಿನ ಮೇಲೆ ಡ್ರೋನ್ ದಾಳಿ ಯಾರು ನಡೆಸಿದ್ದಾರೆಂದು ಇನ್ನೂ ತಿಳಿದು ಬಂದಿಲ್ಲ.

ಕಚ್ಚಾ ತೈಲವನ್ನು ಹೊತ್ತ ಹಡಗು ಸೌದಿ ಅರೇಬಿಯಾದ ಬಂದರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಭಾರತೀಯ ವಿಶೇಷ ಆರ್ಥಿಕ ವಲಯದಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್‌ಗೆ ಸಂಕಷ್ಟದಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ಹೋಗುವಂತೆ ಸೂಚಿಸಲಾಗಿದೆ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ತೊಂದರೆಯಲ್ಲಿ ಸಿಲುಕಿರುವ ಹಡಗಿಗೆ ನೆರವು ನೀಡುವಂತೆ ಕೋಸ್ಟ್ ಗಾರ್ಡ್ ನೌಕೆಯು ಆ ಪ್ರದೇಶದಲ್ಲಿನ ಎಲ್ಲಾ ಹಡಗುಗಳಿಗೆ ಸೂಚಿಸಿದೆ.

Exit mobile version